ಬಿಜಿಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಇತ್ತೀಚೆಗೆ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿ. ಎಸ್ ಎಂ ಕೃಷ್ಣ ಅವರಿಗೆ ಪುತ್ತೂರು ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು.

ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್‌ರವರು ನುಡಿನಮನ ಸಲ್ಲಿಸಿದರು. ಬಳಿಕ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ವಿದ್ಯಾಧರ ಜೈನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ಸಾಜ ರಾದಕೃಷ್ಣ ಆಳ್ವ, ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಸೇರಿದಂತೆ ಗ್ರಾಮಾಂತರ ಹಾಗೂ ನಗರ ಮಂಡಲಗಳ ಪದಾಧಿಕಾರಿಗಳು ಮಹಾಶಕ್ತಿಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು , ಮಹಿಳಾ ಮೋರ್ಚಾದ ಪ್ರಮುಖರು , ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here