ಪುತ್ತೂರು: ಗ್ರಾಮದ ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಒಳಮೊಗ್ರು ಗ್ರಾಮ ಪಂಚಾಯತಿಗೆ ಸಂಬಂಧಿಸಿದ 2023-24ನೇ ಸಾಲಿನ ಜಮಾಬಂದಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರವರ ಅಧ್ಯಕ್ಷತೆಯಲ್ಲಿ ಡಿ.16ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಶೈಲಜ ಭಟ್ರವರು ನೋಡೆಲ್ ಅಧಿಕಾರಿಯಾಗಿ ಜಮಾಬಂದಿ ನಡೆಸಿಕೊಟ್ಟರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಕಾರ್ಯದರ್ಶಿ ಜಯಂತಿ ಉಪಸ್ಥಿತರಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ ಸ್ವಾಗತಿಸಿ, ವಂದಿಸಿದರು. ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಪಂ ಸಿಬ್ಬಂದಿಗಳಾದ ಗುಲಾಬಿ, ಜಾನಕಿ, ಲೋಕನಾಥ, ಮೋಹನ್ ಸಹಕರಿಸಿದ್ದರು.