ಪುತ್ತೂರು: ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸಂಪ್ಯ-ಕಲ್ಲರ್ಪೆ ನಡುವಿನ ಶ್ರೀ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ನಡೆದಿದೆ.
ಸಿಟಿ ಹೋಂಡಾ, ಎರ್ಟಿಗಾ, ಫಾರ್ಚೂನರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಗುವಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದಾಗಿ ಹೆದ್ದಾರಿಯ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.