ಡಿ.17ರಂದು ನಾಮಪತ್ರ ಸಲ್ಲಿಕೆ ಪ್ರಾರಂಭ
ಮುಂಡೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆ ಡಿ.29ರಂದು ನಡೆಯಲಿದೆ. ಡಿ.17ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಡಿ.21ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ.
ಡಿ.22ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಪರಿಶೀಲನೆಯ ಬಳಿಕ ಅದೇ ದಿನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಡಿ.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅದೇ ದಿನ ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ನಡೆಯಲಿದೆ.
ಡಿ.25ರಂದು ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಚಿಹ್ನೆಯೊಂದಿಗೆ ಪ್ರಕಟಿಸಲಾಗುತ್ತದೆ. ಡಿ.29ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.