ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಮೇಧಾ ಪರೀಕ್ಷೆ ‘ ಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿಗಳಾದ ಅನೀಶ್ ಪ್ರಭು 11ನೇ ರ್ಯಾಂಕ್ ಮತ್ತು ಪಿ. ಶಶಾಂಕ್ ಭಟ್ 25ನೇ ರ್ಯಾಂಕ್ ಪಡೆದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದಿನ ವರ್ಷ ಉಚಿತ ಪಿ.ಯು.ಸಿ ಶಿಕ್ಷಣವನ್ನು ಪಡೆಯಲು ಅರ್ಹತೆ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.