ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅಮ್ಚಿನಡ್ಕ ಜಂಕ್ಷನ್ ಹತ್ತಿರ ಟೆಂಪೊ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗಿಳಿದ ಘಟನೆ ಡಿ.17 ರಂದು ನಸುಕಿನ ಜಾವ ನಡೆದಿದೆ.
ಮೈಸೂರಿನಿಂದ ಕೊಲ್ಲೂರಿಗೆ ಹೋಗುತ್ತಿದ್ದ ಟೆಂಪೊ ಟ್ರಾವೆಲರ್, ಚಾಲಕನ ನಿಯಂತ್ರಣ ತಪ್ಪಿ ಅಮ್ಚಿನಡ್ಕ ಜಂಕ್ಷನ್ ನಲ್ಲಿ ರಸ್ತೆ ಪಕ್ಕದ ಚರಂಡಿಗೆ ಇಳಿದಿದೆ. ಘಟನೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.