ಅರಿಯಡ್ಕ: ಮಾಡ್ನೂರು ಪರಿಸರದಲ್ಲಿ ಕೆಲ ದಿನಗಳಿಂದ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಕೃಷಿ ತೋಟಗಳಿಗೆ ಲಗ್ಗೆಯಿಟ್ಟು ಕೃಷಿಗೆ ಹಾನಿಯನ್ನುಂಟು ಮಾಡುತ್ತಿದೆ.
ಮಾಡ್ನೂರು ಗ್ರಾಮದ ಕೃಷ್ಣಪ್ರಸಾದ್ ಎಂಬವರ ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ಕೃಷಿಗೆ ಹಾನಿಯುಂಟು ಮಾಡಿದೆ. ಅಡಿಕೆ ಗಿಡ ಸೇರಿದಂತೆ ತೋಟದ ಇತರ ಕೃಷಿಗಳಿಗೂ ಹಾನಿಯನ್ನುಂಟು ಮಾಡಿದ್ದು, ಕಾಡಾನೆಗಳ ನಿರಂತರ ದಾಳಿಯಿಂದಾಗಿ ಈ ಭಾಗದ ಕೃಷಿಕರು ಕಂಗಾಲಾಗಿದ್ದಾರೆ.