(ಡಿ.22) ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ

0


ಪುತ್ತೂರು: ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಪುತ್ತೂರು ತಾಲೂಕು ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಸಂಘದ ಕಛೇರಿಯಲ್ಲಿ ಡಿ.22 ರಂದು ಪೂರ್ವಾಹ್ನ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.


ಸಾಮಾನ್ಯ ಸ್ಥಾನಗಳು 9, ಪ.ಜಾತಿ ಮೀಸಲು ಸ್ಥಾನ 1, ಪ.ಪಂಗಡ ಮೀಸಲು ಸ್ಥಾನ 1, ಹಿಂದುಳಿದ ವರ್ಗ ಮೀಸಲು ಸ್ಥಾನಗಳು ಎ. 1 ಮತ್ತು ಬಿ.1 ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಕವಿತಾ ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here