ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯಿತಿನ 2024-25 ನೇ ಸಾಲಿನ ಮಹಿಳಾ ಗ್ರಾಮ ಸಭೆಯು ದ.19 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಕಾವ್ಯರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಗ್ರಾಮದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.