ರಾಮಕುಂಜ: ಕುಂಡಾಜೆ ಸರಕಾರಿ ಕಿ.ಪ್ರಾ.ಶಾಲೆಯ ನಲಿಕಲಿ ವಿದ್ಯಾರ್ಥಿಗಳಿಗೆ ನಿವೃತ್ತ ಮುಖ್ಯಗುರು ಕುಶಾಲಪ್ಪ ಕೆಮ್ಮಾರ ಹಾಗೂ ಕುಂಡಾಜೆ ಶಾಲೆ ಶಿಕ್ಷಕಿ ಪುಷ್ಪಾವತಿ ಎಂ.ರವರ ಪುತ್ರಿ, ಸ್ವರ್ಣ ಇಂಟಿರಿಯರ್ ವರ್ಲ್ಡ್ ಮಾಲಕಿ ಸ್ವರ್ಣ ಕೆಮ್ಮಾರ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಫೈಬರ್ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು.
ಅಲ್ಲದೆ ಈ ವೇಳೆ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ ಸಿಹಿ ತಿಂಡಿಯನ್ನೂ ವಿತರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಫೈಬರ್ ಕುರ್ಚಿಗಳಿಂದಾಗಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆಗೆ ಅನುಕೂಲಕರವಾಗಿದ್ದು ವಿದ್ಯಾರ್ಥಿಗಳು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.