





ಪುತ್ತೂರು: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಈಶ ಎಜ್ಯುಕೇಶನಲ್ & ಸೋಶಿಯಲ್ ಸರ್ವೀಸ್ ಟ್ರಸ್ಟ್ (ರಿ) ನೆಲ್ಲಿಕಟ್ಟೆ ಪುತ್ತೂರು ಇದರ ಆಡಳಿತದಲ್ಲಿ ನಡೆಸಲ್ಪಡುತ್ತಿರುವ ಈಶ ವಿದ್ಯಾಲಯದಲ್ಲಿ ಎರಡನೇ ಹಂತದ ಹಿರಿಯ ವಿದ್ಯಾರ್ಥಿಗಳ ವಿಶೇಷ ಸಭೆಯು ಸಂಸ್ಥೆಯಲ್ಲಿ ನಡೆಯಿತು.


ಸಂಸ್ಥೆಯ ಪ್ರಾಂಶುಪಾಲರಾದ ಡಾ.ಗೋಪಾಲಕೃಷ್ಣ.ಎಂ.ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ,ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ, ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು.ಮುಂದಿನ ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ನಿರ್ಣಯಿಸಲಾಯಿತು.





ಸಂಸ್ಥೆಯ ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಲೈವಾಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಗೀತಾ ಕೊಂಕೋಡಿ ವಂದಿಸಿದರು.









