ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಮತ್ತು ಹವಾನಿಯಂತ್ರಿತ ಕಂಪ್ಯೂಟರ್ ಕೊಠಡಿ, ಗ್ರಂಥಾಲಯ, ಶೌಚಾಲಯದ ಉದ್ಘಾಟನೆ ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ದಶರಥ್ ರೈ, ಹೊನ್ನಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ಚನಿಯಪ್ಪ, ರೇವತಿ, ಲೀಲಾವತಿ, ಭಾಗೀರಥಿ, ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ, ಸಹಶಿಕ್ಷಕರಾದ ಪೂರ್ಣಿಮಾ ಶೆಟ್ಟಿ ಮತ್ತು ಪ್ರವೀಣಾ ರೈ ಉಪಸ್ಥಿತರಿದ್ದರು.
