





ಆರೋಗ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುತ್ತೂರಿಗೆ


ಪುತ್ತೂರು: ಪುತ್ತೂರು ಹಾಗೂ ಉಪ್ಪಿನಂಗಡಿಯಲ್ಲಿ ಡಿ.21ರ ಇಂದು ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಆಗಮಿಸಲಿದ್ದಾರೆ.






ಬೆಳಿಗ್ಗೆ 11.50 ಪುತ್ತೂರಿಗೆ ಆಗಮಿಸಲಿರುವ ಸಚಿವ ದಿನೇಶ್ ಗುಂಡೂರಾವ್ ಸರಕಾರಿ ಆಸ್ಪತ್ರೆಯಲ್ಲಿ ಬಿಪಿಎಚ್ ಲ್ಯಾಬ್ ಕಟ್ಟಡ ಹಾಗೂ ಇತರ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪುರಭವನದಲ್ಲಿ ತಾಲೂಕಿನ ವಿವಿಧ ಉಪಕೇಂದ್ರಗಳ ಶಂಕುಸ್ಥಾಪನೆ, ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಉದ್ಘಾಟನೆ, ಕಾರ್ಮಿಕ ಇಲಾಖೆಯ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಉಪ್ಪಿನಂಗಡಿಗೆ ಆಗಮಿಸಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಉದ್ಘಾಟಿಸಲಿದ್ದಾರೆ. ನಂತರ ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.





