ಪುತ್ತೂರು:ಪುತ್ತೂರು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಉದ್ಘಾಟಿಸಿ, ಗ್ರಾಮೀಣ ಜನರಿಗೆ ಉತ್ತಮ ಸೇವೆ ನೀಡುವುದೆ ಸೇವಾಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ C R E ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಮಾಹಿತಿ ಮಾರ್ಗದರ್ಶನ ನೀಡಿದರು. ಯೋಜನಾಧಿಕಾರಿ ಶಶಿಧರ್, ಸೇವಾಪ್ರತಿನಿಧಿ, ಕೃಷಿ ಮೇಲ್ವಿಚಾರಕ ಶಿವರಂಜನ್ ಉಪಸ್ಥಿತರಿದ್ದರು.