ಪುತ್ತೂರು: ಉಪ್ಪಿನಂಗಡಿಯ ಪದಾಳ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ) ಇದರ
ಕಲಾತಂಡದಿಂದ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾಕೇಂದ್ರದ ವಿದ್ಯಾರ್ಥಿಗಳು ಭರತನಾಟ್ಯ ನಡೆಸಿಕೊಟ್ಟರು.