ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯು ಆಡಳಿತ ಅಧಿಕಾರಿ, ಕಾಣಿಯೂರು ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ರಘು ಬಿ ಎನ್ ಅವರ ಅಧ್ಯಕ್ಷತೆಯಲ್ಲಿ ಡಿ 21ರಂದು ನಡೆಯಿತು.
ಜ 17 ರಿಂದ 25ರವರೆಗೆ ನಡೆಯುವ ಜಾತ್ರೆಯ ಬಗ್ಗೆ ಚರ್ಚಿಸಲಾಯಿತು.ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಜೋಡು ದೈವಗಳ ಆಡಳಿತದಾರ ಕುಸುಮಾಧರ ರೈ ಕಾಸ್ಪಾಡಿಗುತ್ತು, ಆಡಳಿತ ಪಂಗಡದ ಅಧ್ಯಕ್ಷರ ಕುಸುಮಾದರ ಬೀರೊಳಿಗೆ, ಅರ್ಚಕ ವೆಂಕಟಕೃಷ್ಣ ಭಟ್, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಉದನಡ್ಕ, ಹಾಗೂ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಸದಸ್ಯರು, 8 ಮನೆಯವರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ದೇವಾಲಯದ ಸಿಬ್ಬಂದಿ ವರ್ಗ, ಭಕ್ತಾಧಿಗಳು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಸದಸ್ಯ ಗೋಪಾಲಕೃಷ್ಣ ಬಾರೆಂಗಳ ಸ್ವಾಗತಿಸಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿ ಸದಸ್ಯ ವಸಂತ ದಲಾರಿ ವಂದಿಸಿದರು.