





ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.


ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನದ ಬಳಿಕ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸದಸ್ಯರ ನಿಯೋಗ ಡಿ.23ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಂಗಳೂರು ಕೇಂದ್ರ ಕಚೇರಿಗೆ ತೆರಳಿ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಸಹಕಾರಿ ಸಂಘದ ಸಹಕಾರ ಕೋರಿದರು.





ಈ ಸಂದರ್ಭ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಈಶ್ವರ ಭಟ್ ಪಂಜಿಗುಡ್ಡೆಯವರನ್ನು ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ್ ಸುವರ್ಣ, ಈಶ್ವರ್ ಬೇಡೆಕರ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.








