ಪುತ್ತೂರು: ಡಿ 22 ರಂದು ಕೊಳ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದೊತ್ತಡ ಮತ್ತು ಮಧುಮೇಹ ಚಿಕಿತ್ಸಾ ಕಾರ್ಯಕ್ರಮ ಡಿ.22 ರಂದು ನಡೆಯಿತು.
ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋಟರಿ ಬ್ಲಡ್ ಬ್ಯಾಂಕ್ ಸೆಂಟರ್ ನ ತಾಂತ್ರಿಕ ಮೇಲ್ವಿಚಾರಕಿ ಸಜನಿ ಮಾರ್ಟಿಸ್, ಕೊಳ್ತಿಗೆ ಶಾಲೆಯ ಮುಖ್ಯ ಶಿಕ್ಷಕರಾದ ರವಿರಾಜ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಹರಿಣಿ ಮಹಾಬಲ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಕೃಷ್ಣಪ್ಪ ಗೌಡ ಬಾಯಂಬಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯತ್ ಕೆಮ್ಮಾರ ಇವರು ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಊರವರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಚಿಕಿತ್ಸಾ ತಪಾಸಣೆಯನ್ನು ಮಾಡಲಾಯಿತು.
ಹಳೆ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಶೋಭಿತ್ ಕೆಮ್ಮಾರ ಸ್ವಾಗತಿಸಿದರು, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ವಿಜೇಶ್ ರೈ ಕೆಳಗಿನಮನೆ ಅಭಿನಂದಿಸಿದರು. ಶಾಹುಲ್ ಅಮಳ ಕಾರ್ಯಕ್ರಮ ನಿರೂಪಿಸಿದರು.