ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಸರಕಾರಿ ಶಾಲೆಯಲ್ಲಿ ನಾನು ಕೂಡಾ ಕಲಿತಿದ್ದು ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಇಲ್ಲಿನ ವಿದ್ಯಾರ್ಥಿಗಳ ಕಲಿಕೆಯ ದೃಷ್ಟಿಯಿಂದ ಪ್ರೌಢಶಾಲೆ, ವಸತಿ ನಿಲಯ ಮುಂತಾದವುಗಳನ್ನು ತರುವ ಮೂಲಕ ವಿದ್ಯೆಗೆ ಸಹಕಾರ ನೀಡುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಡಿ.21ರಂದು ನಡೆದ ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಇಲ್ಲಿಗೆ ಜೂನಿಯರ್ ಕಾಲೇಜು, ಕೆಪಿಎಸ್ ಮಾದರಿಯ ಶಾಲೆಯನ್ನು ತರಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಜೊತೆ ಸಮಾಲೋಚನೆ ಮಾಡಿದ್ದೇನೆ ಎಂದು ಹೇಳಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ. ಇಲ್ಲಿಗೆ ಶಿಕ್ಷಣದ ಅಭಿವೃದ್ಧಿಗೆ ಪೂರಕವಾದ ಕಟ್ಟಡಗಳು ಹಾಗೂ ಅಭಿವೃದ್ದಿಯ ದೃಷ್ಟಿಯಲ್ಲಿ ಈ ಊರಿನ ಸರ್ವಾಂಗಿಣ ಅಭಿವೃದ್ದಿಗೆ ನಾನು ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಮುಖ್ಯಗುರು ಜಯರಾಮ್ ಶೆಟ್ಟಿ ಕೆ ದೀಪ ಬೆಳಗಿಸಿ ಉದ್ಘಾಟಿಸಿದರು.
ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಿತು. ಮುಖ್ಯಅಧ್ಯಾಪಕಿ ಉಮಾವತಿ ವರದಿ ವಾಚಿಸಿದರು. ಜಿ.ಪಂ ಮಾಜಿ ಉಪಾಧ್ಯ ಎಂ.ಎಸ್ ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶಶಿಕುಮಾರ್ ರೈ ನೂಜಿಬೈಲು, ಶಾಲಾ ನಿಕಟ ಪೂರ್ವ ಕಾರ್ಯಾಧ್ಯಕ್ಷ ಕರುಣಾಕರ ಗೌಡ ಎಲಿಯ, ಕಲ್ಪಣೆ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ್ ನೇರೋಳ್ತಡ್ಕ, ಯತೀಶ್ ರೈ ಮೇಗಿನಗುತ್ತು, ರಾಮಚಂದ್ರ ಸೊರಕೆ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಅಝೀಝ್ ರೆಂಜಲಾಡಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಾ, ಹರೀಶ್ ಆಚಾರ್ಯ, ತಾಜು ರಫೀಕ್ , ಉದಯ ಕುಮಾರ್, ಸಹದೇವ್, ಜಾರ್ಜ್, ಕಾಂಚನಾ, ನಳಿನಿ, ವೆಂಕಟೇಶ್, ಉಮಾಶಂಕರ್, ಜ್ಯೋತಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕ ಸಹದೇವ್ ಸ್ವಾಗತಿಸಿದರು. ಶಿಕ್ಷಕಿ ಉಮೈರಾ ತಬಸ್ಸಮ್ ವಂದಿಸಿದರು. ಜಾರ್ಜ್ ಹಾಗೂ ನಳಿನಿ ಕಾರ್ಯಕ್ರಮ ನಿರೂಪಿಸಿದರು.