ಡಿ.24: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಆಹಾರ ಗುಣಮಟ್ಟ ಪರಿಶೀಲನೆ, ವಿವಿಧ ಸಮಿತಿ ಸಭೆ

0

ಪುತ್ತೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿ ಸಭೆ ಡಿ.24ರಂದು ಅಪರಾಹ್ನ 4.30 ಗಂಟೆಗೆ ಕೊಂಬೆಟ್ಟಿನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ.


ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಉಪವಿಭಾಗ ಮಟ್ಟದ ಸಮಿತಿ ಸಭೆ ಡಿ.24ರಂದು ಅಪರಾಹ್ನ 3.30ಕ್ಕೆ ಪುತ್ತೂರು ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದ 2ನೇ ಮಹಡಿಯಲ್ಲಿ ನಡೆಯಲಿದೆ.

ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟಿನ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಪುತ್ತೂರು ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಡಿ.24ರಂದು ಅಪರಾಹ್ನ 2.30 ಗಂಟೆಗೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಲಿದೆ. ಸಭೆಗೆ ಎಲ್ಲಾ ಸದಸ್ಯ ಅಧಿಕಾರಿಗಳು ಆಗಮಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here