ಪುತ್ತೂರು ನಗರಸಭಾ ಕಛೇರಿ ಸಭಾಭವನದಲ್ಲಿ ಬೆಳಿಗ್ಗೆ ೧೧ರಿಂದ ನಗರಸಭೆಯ ಸಾಮಾನ್ಯ ಸಭೆ
ಪುತ್ತೂರು ತಾಲೂಕು ಆಡಳಿತ ಸೌಧ ೨ನೇ ಮಹಡಿ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಅಪರಾಹ್ನ ೨.೩೦ರಿಂದ ಅನುಸೂಚಿತ ಜಾತಿಗಳ, ಅನುಸೂಚಿತ ಬುಡಕಟ್ಟುಗಳ ಕಾಯ್ದೆ, ನಿಯಮಗಳ ಉಪ ವಿಭಾಗ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ, ೩.೩೦ರಿಂದ ಸಫಾಯಿ ಕರ್ಮಚಾರಿಗಳ ನಿಷೇಧ, ಪುನರ್ವಸತಿಯ ಉಪವಿಭಾಗ ಮಟ್ಟದ ಸಮಿತಿ ಸಭೆ
ಪುತ್ತೂರು ಕಿಲ್ಲೆ ಮೈದಾನದಲ್ಲಿ ಪುತ್ತೂರು ಬಪ್ಪಳಿಗೆ ಸಿಟಿ ಫ್ರೆಂಡ್ಸ್ ಆರ್ಟ್ಸ್ & ಸ್ಪೋಟ್ಸ್ ಕ್ಲಬ್ ವತಿಯಿಂದ ಅಮರ್ ಅಕ್ಬರ್ ಅಂತೋನಿ ರೋಲಿಂಗ್ ಟ್ರೋಫಿ-ಕ್ರಿಕೆಟ್ ಪಂದ್ಯಾಟ
ಕೊಂಬೆಟ್ಟು ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಂಜೆ ೪.೩೦ಕ್ಕೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿನ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲು ಸಮಿತಿಯ ಸಭೆ
ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಒಳಮೊಗ್ರು ಗ್ರಾ.ಪಂನ ಮಹಿಳಾ ಗ್ರಾಮಸಭೆ
ಕೋಡಿಂಬಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂಜೆ ೪ರಿಂದ ಹಿರಿಯ ವಿದ್ಯಾರ್ಥಿಗಳ ಸಭೆ
ತಿಂಗಳಾಡಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೧೦.೩೦ರಿಂದ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಇಂಟರ್‌ಲಾಕ್ ಸಮರ್ಪಣೆ, ಮಧ್ಯಾಹ್ನ ೨.೩೦ರಿಂದ ಸಾಂಸ್ಕೃತಿಕ ಕಾರ್ಯಕ್ರಮ
ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ ವಾರ್ಷಿಕ ಕ್ರೀಡಾಕೂಟ
ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಬೆಳಿಗ್ಗೆ ೧೦ರಿಂದ ಪ್ರತಿಭಾ ಪುರಸ್ಕಾರ, ಸಂಜೆ ೭ರಿಂದ ಸಭಾ ಕಾರ್ಯಕ್ರಮ
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ಬೆಳಿಗ್ಗೆ ೧೦ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಅಪರಾಹ್ನ ೨ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ಕೆದಿಲ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಸನ್ಯಾಸಿಗುಡ್ಡೆ ಕೆದಂಬಾಡಿ ಶ್ರೀರಾಮ ಮಂದಿರದಲ್ಲಿ ರಾತ್ರಿ ೭.೩೦ರಿಂದ ಭಜನೆ, ೯ರಿಂದ ಅನ್ನಸಂತರ್ಪಣೆ
ಕಂಬಳಬೆಟ್ಟು ಧರ್ಮನಗರ ಮಲರಾಯ ಜೇರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮಧ್ಯಾಹ್ನ ೨ಕ್ಕೆ ಡೆಚ್ಚಾರು ಮಲರಾಯ ದೈವದ ಭಂಡಾರ ಸನ್ನಿಧಿಯಲ್ಲಿ ತಂಬಿಲ ಸೇವೆ, ಸಂಜೆ ೪ಕ್ಕೆ ಜೈನೆರಕೋಡಿ ಮೂವರ್ ದೈವಂಗಳು ಭಂಡಾರ ಹೊರಡುವುದು, ರಾತ್ರಿ ೭ರಿಂದ ನೃತ್ಯ-ಗಾನ ಸಂಭ್ರಮ, ೯ಕ್ಕೆ ವೈದ್ಯನಾಥ ನೇಮೋತ್ಸವ, ರಾತ್ರಿ ೧೨ಕ್ಕೆ ಮೂವರ್ ದೈವಂಗಳಿಗೆ ನೇಮೋತ್ಸವ
ತೋಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನ ಬ್ರಹ್ಮಶ್ರೀ ಬೈದರ್ಕಳ ಗರಡಿ ಶ್ರೀ ಕ್ಷೇತ್ರದ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ ೧೦.೩೦ರಿಂದ ಪುತ್ತೂರು ಜಗದೀಶ್ ಆಚಾರ್ಯ ಬಳಗದಿಂದ ಸಂಗೀತ ಗಾನ ಸಂಭ್ರಮ
ಧನುಪೂಜೆ
ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ