ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಪ್ರತಿಭಾ ಪುರಸ್ಕಾರ ಚೆಕ್ ನ್ನು ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಪದ್ಮಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೋಭಾ ಬಾಕಿಲ, ಶಿಕ್ಷಕಿ ಪ್ರತಿನಿಧಿ ಮೋಹಿನಿ ಎನ್, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.