ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮ ಡಿ.24 ರಂದು ನಡೆಯಿತು.
ಶಾಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಹುಸೇನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಕ್ರೀಡಾಕೂಟವನ್ನು ಬೆಂಗಳೂರು ಡೆಕ್ಕನ್ ಏರ್ ವೇಸ್ ನ ಚಂದ್ರಶೇಖರ್ ಗೌಡ ಉದ್ಘಾಟಿಸಿದರು. ದಾನಿಗಳಾದ ಮನೋಜ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ತಾಲೂಕ ದೈಹಿಕ ಶಿಕ್ಷಣ ನಿರ್ದೇಶಕರಾದ ಚಕ್ರಪಾಣಿ ಪಥ ಸಂಚಲನಾ ವಂದನೆ ಸ್ವೀಕರಿಸಿದರು. ರಿತೇಶ್ ಕುಮಾರ್ ಕ್ರೀಡಾಜ್ಯೋತಿ ಬೆಳಗಿಸಿದರು. ವಿದ್ಯಾರ್ಥಿನಿ ತನುಶ್ರೀ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ವೇದಿಕೆಯಲ್ಲಿ ಶಾಲಾಭಿವೃದ್ದಿ ಸದಸ್ಯರಾದ ನಾಗೇಶ್ ನಾಯ್ಕ, ಸೀತಾರಾಮ , ರೇವತಿ , ಭಾಗೀರಥಿ, ಲೀಲಾವತಿ ಉಪಸ್ಥಿತರಿದ್ದರು.
ಪ್ರಾಥಮಿಕಶಾಲಾ ಮುಖ್ಯ ಶಿಕ್ಷಕರಾದ ಶಶಿಕಲಾ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ ಧನ್ಯವಾದ ಸಲ್ಲಿಸಿದರು. ಸಹಶಿಕ್ಷಕಿ ಸವಿತಾ ಪಿ ಕಾರ್ಯಕ್ರಮ ನಿರೂಪಿಸಿದರು.