ರಾಷ್ಟ್ರೀಯ ಗ್ರಾಹಕರ ದಿನಾಚರಣೆಯಲ್ಲಿ ಕಾನೂನು ಮಾಹಿತಿ ಕಾರ್ಯಗಾರ

0

ಪುತ್ತೂರು:  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಪುತ್ತೂರು ಮತ್ತು ಪುತ್ತೂರು ಛೇಂಬರ್ ಆಫ್ ಕಾಮರ್ಸ್ ಪುತ್ತೂರು ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಪುತ್ತೂರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಕಾನೂನು ಮಾಹಿತಿ ಕಾರ್ಯಗಾರವು ಲಯನ್ಸ್ ಕ್ಲಬ್ ಹಾಲ್ ನಲ್ಲಿ ನಡೆಯಿತು.

ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ ಎಂ ಎಸ್ ಸಿ ಯ ಅರ್ಚನಾ ಕೆ ಉಣ್ಣಿತಾನ್  ಅವರು ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಗ್ರಾಹಕರ ಕಾನೂನಿ‌ ಕುರಿತು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ್ ರೈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ಯಾನೆಲ್ ವಕೀಲೆ ಹೀರಾ ಉದಯ್ ಅವರು ಗ್ರಾಹಕರ ಹಕ್ಕುಗಳ ಬಗ್ಗೆ ಮಾತನಾಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ ಅವರು ಶುಭಹಾರೈಸಿದರು.

ಲಯನ್ಸ್ ಕ್ಲಬ್ ಪುತ್ತೂರು ಅಧ್ಯಕ್ಷೆ ಪ್ರೇಮಲತಾ ರಾವ್ ಸ್ವಾಗತಿಸಿ, ಪ್ಯಾರಾ ಲೀಗಲ್ ವ್ಯಾಲೆಂಟಿಯರ್, ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ದ.ಕ ಕಾರ್ಯದರ್ಶಿ ನಯನ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ಯಾನೆಲ್ ವಕೀಲರಾದ ಪ್ರಿಯ ವಂದಿಸಿದರು. ಪ್ಯಾನೆಲ್ ವಕೀಲರಾದ ಅಶ್ವಿನಿ, ಲಯನ್ಸ್ ಜಿಲ್ಲಾಧ್ಯಕ್ಷ ವತ್ಸಲಾ ರಾಜ್ಞಿ, ಕೋಶಾಧಿಕಾರಿ ಲಯನ್ ಸುಧಾಕರ್ ಪ್ಯಾರಾ ಲೀಗಲ್ ವಾಲೆಂಟಯರ್ ರೋಹಿಣಿ ರಾಘವ ಆಚಾರ್ಯ ಹಾಗೂ ಜ್ಯೋತಿ ಸಹಕರಿಸಿದ್ದರು.

LEAVE A REPLY

Please enter your comment!
Please enter your name here