ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟ:ದ.ಕ.ಜಿಲ್ಲೆಯ ಒಟ್ಟು ಮತದಾರರು 18,13,556

0

ಪುತ್ತೂರು: ಭಾರತ ಚುನಾವಣಾ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ.ರವರು ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿದರು.


ವಿಧಾನಸಭಾವಾರು ಅಂತಿಮ ಮತದಾರರು:
ದ.ಕ.ಜಿಲ್ಲೆಯ ವಿಧಾನಸಭಾವಾರು ಮತದಾರರ ಪೈಕಿ ಬೆಳ್ತಂಗಡಿ ಕ್ಷೇತ್ರದಲ್ಲಿ 2,32,235, ಮೂಡುಬಿದಿರೆ ಕ್ಷೇತ್ರದಲ್ಲಿ 2,10,088, ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ 2,55,515, ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 2,52,268, ಮಂಗಳೂರು ಕ್ಷೇತ್ರದಲ್ಲಿ 2,10,127, ಬಂಟ್ವಾಳ ಕ್ಷೇತ್ರದಲ್ಲಿ 2,28,962, ಪುತ್ತೂರು ಕ್ಷೇತ್ರದಲ್ಲಿ 2,16,068 ಹಾಗೂ ಸುಳ್ಯ ಕ್ಷೇತ್ರದಲ್ಲಿ 2,08,293 ಮತದಾರರಿದ್ದಾರೆ.


ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಮತ್ತು ಲೋಪದೋಷಗಳ ಬಗ್ಗೆ ಪರಿಶೀಲಿಸಿಕೊಳ್ಳಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. www.ceokarna- taka.kar.nic.in, https://voters. eci.gov.in ಮತ್ತು www.dk.nic.inನಲ್ಲಿ ವಿವರಗಳನ್ನು ಪರಿಶೀಲಿಸಬಹುದು. ಅಲ್ಲದೆ ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

ಹೆಸರು ತಿದ್ದುಪಡಿಗೆ ಅವಕಾಶ
ಜನವರಿ 6ರ ನಂತರ ಮತದಾರರ ಪರಿಷ್ಕರಣೆ ನಿರಂತರ ಚಾಲ್ತಿಯಲ್ಲಿದ್ದು ಜನವರಿ 1, ಎಪ್ರಿಲ್ 1, ಜುಲೈ 1, ಅಕ್ಟೋಬರ್ 1 ದಿನಾಂಕಗಳಿಗೆ 18 ವರ್ಷ ತುಂಬುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ನಿರಂತರ ಪರಿಷ್ಟರಣೆಯ ಸಂದರ್ಭದಲ್ಲಿ ಹೆಸರು ತೆಗೆದು ಹಾಕಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ. ಅರ್ಹ ಮತ್ತು ಯುವ ಮತದಾರರು ಆನ್‌ಲೈನ್ ಮೂಲಕ Voter Helpline App (VHA) ಮತ್ತು ಮೊಬೈಲ್ ಆಪ್ Voters service portal https://voters.eci.gov.in
ಮೂಲಕ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here