ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಆರೋಪಿ ಮೊಹಮ್ಮದ್ ಜಾಬೀರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

0

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ನಿವಾಸಿ 32 ವರ್ಷದ ಜಾಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಬಳಿಕ ಆರೋಪಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಇದೀಗ ಅಲ್ಲಿಯೂ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

LEAVE A REPLY

Please enter your comment!
Please enter your name here