ಕೆಯ್ಯೂರು: ಕೆಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ತಯಾರಿ ಹಾಗೂ ವೃತ್ತಿ ಮಾರ್ಗದರ್ಶನ’ ಮಾಹಿತಿ ಕಾರ್ಯಾಗಾರ ಜ.9ರಂದು ಕೆಪಿಎಸ್ ಕೆಯ್ಯೂರು ಸಭಾಂಗಣದಲ್ಲಿ ನಡೆಯಿತು. ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಾಂತರಾಜು ಸಿ. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪಿಯುಸಿ ಪರೀಕ್ಷಾ ಸಿದ್ಧತೆ ಹಾಗೂ ಸರಕಾರಿ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಸವಿಸ್ತಾರ ಮಾಹಿತಿ ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ಇಸ್ಮಾಯಿಲ್ ಪಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಎ. ಕೆ. ಜಯರಾಮ ರೈ ಕೆಯ್ಯೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ. ಎಸ್. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯಗುರು ಬಾಬು ಎಂ. ಉಪಸ್ಥಿತರಿದ್ದರು. ಕಾಂತರಾಜು ಸಿ. ಅವರನ್ನು ಸಂಸ್ಥೆಯ ವತಿಯಿಂದ ಪುಸ್ತಕ ಕಾಣಿಕೆ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳಾದ ದಿವ್ಯಾ, ಆಶಾಕುಮಾರಿ, ಗಗನಾ ಪಿ., ಜೀವಿತಾ ಕೆ., ನಿರೀಕ್ಷಾ ಎ. ಕೆ. ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಗುಣಶೀಲ ಕೆ. ಎನ್. ಸ್ವಾಗತಿಸಿದರು. ವಿದ್ಯಾರ್ಥಿ ಮಹಮ್ಮದ್ ಜಿಯಾದ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ನೆರವೇರಿಸಿದರು. ಇತಿಹಾಸ ಉಪನ್ಯಾಸಕಿ ಉಮಾಶಂಕರಿ ಎಸ್. ಕೆ. ವಂದಿಸಿದರು. ಇಂಗ್ಲಿಷ್ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ನಿರೂಪಿಸಿದರು. ಕನ್ನಡ ಉಪನ್ಯಾಸಕ ಆನಂದ ಎನ್., ವಿದ್ಯಾರ್ಥಿ ಸಂಘದ ಸಿಂಚನಾ, ರಂಜೀನಾ, ಲೋಕೇಶ್, ಭವಿಷ್ಯ ಹಾಗೂ ಲಾವ್ಯ ಕಾರ್ಯಕ್ರಮ ನಿರ್ವಹಿಸಿದರು.