ಕಾಣಿಯೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಸೀನಿಯರ್ ಗ್ರೇಡ್ ಭರತನಾಟ್ಯ ಪರೀಕ್ಷೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಮಾನ್ವಿ ಜಿ.ಎಸ್ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿರುತ್ತಾರೆ.
ಇವರು ಸವಣೂರು ಪುಣ್ಚಪಾಡಿಯ ದೇವಸ್ಯ ಗಿರಿಶಂಕರ್ ಸುಲಾಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರಿನ ಶಿಕ್ಷಕಿ ಸುಜಯ ಎಸ್ ದಂಪತಿಗಳ ಸುಪುತ್ರಿ.
ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ಅನಘ ಎಂ ಎಸ್ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮಠತಡ್ಕ ಶಿವರಾಮ ನಾಯಕ್ ಮತ್ತು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕಿ ವಿಮಲ ಸಿ ಎಚ್ ದಂಪತಿಗಳ ಸುಪುತ್ರಿ.
ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಪ್ರಣತಿ ಜೆ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಅಕ್ಕಿಗದ್ದೆ ನಿವಾಸಿ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಜೋಗಿಬೆಟ್ಟು ಮತ್ತು ಸಂಧ್ಯಾ ದಂಪತಿಗಳ ಪುತ್ರಿ. ಈ ಎಲ್ಲಾ ವಿದ್ಯಾರ್ಥಿಗಳು ವಿಶ್ವಕಲಾ ನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ (ರಿ) ಪುತ್ತೂರಿನ ನೃತ್ಯ ಶಾಲೆಯ ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ ರೈ ಮತ್ತು ವಿದುಷಿ ಸ್ವಸ್ತಿಕ ಆರ್ ಶೆಟ್ಟಿಯವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.