ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಕರ ಸಭೆ ಹಾಗೂ ಮುಂದಿನ ಶೈಕ್ಷಣಿಕ ಆಯ್ಕೆಗಳ ಕುರಿತು ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ವಂದನಾ ಶಂಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಪ್ರಾಧ್ಯಾಪಕರಾದ ಗೋವಿಂದರಾಜ್ ಪಿ., ಪ್ರಸಕ್ತ ಸನ್ನಿವೇಶದಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ವೃತ್ತಿ ಅವಕಾಶಗಳ ಕುರಿತು ಉಪನ್ಯಾಸ ನೀಡಿದರು.
ಪರೀಕ್ಷಾ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಹಾಗೂ ಸಹಾಯಕರಾದ ಹರಿಪ್ರಸಾದ್ ವಿದ್ಯಾರ್ಥಿಗಳಿಗೆ ಮುಂದಿನ ಕಲಿಕೆಯಲ್ಲಿ ಸಿಗುವ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ನೀಡಿದರು. ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ತಯಾರಿಯಲ್ಲಿ ಪಾಲಕರ ಪಾತ್ರದ ಕುರಿತಂತೆ ವಿವರಿಸಿದರು. ಕಾರ್ಯಕ್ರಮದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ರಜತಾ ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಸುಂದರಿ ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಸ್ವಾತಿ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.