ಪುತ್ತೂರು: ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪೂಜೆ, ಅಭಿಷೇಕಾಧಿಗಳು ನಡೆಯಲಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಭಿಷೇಕ ನಡೆಯಲಿದೆ.
ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 11 ರಿಂದ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ಜರುಗಲಿದೆ. ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಯ ಬಳಿಕ ಉತ್ಸವ ಬಲಿ ನಡೆದು ಕನಕಾಭಿಷೇಕ ನಡೆಯಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.