ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಜ.14 ರಂದು ಬೆಳಗ್ಗೆ ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನಡೆಯಿತು. ರಾತ್ರಿ ಗಂ.10 ರಿಂದ ಸ್ಪರ್ಶ ಕಲಾ ತಂಡ ಸುರತ್ಕಲ್ ಇವರಿಂದ ‘ನಿರೆಲ್’ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ವ್ಯವಸ್ಥಾಪನಾ ಸಮಿತಿ.ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್,ಚದುಕೂಡ್ಲು , ಪವಿತ್ರಪಾಣಿ ಕೇಶವ ಭಟ್ ಕೂವೆತೋಟ, ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಬಲರಾಜ್ ಶೆಟ್ಟಿ ನಿಟ್ಟೆಗುತ್ತು,,ಪೇರಾಲು ಅಧ್ಯಕ್ಷ ಸತೀಶ್ ರೈ ಕಟ್ಟಾವು, ಪ್ರಧಾನ ಕಾರ್ಯದರ್ಶಿ ಜನಾರ್ದನ ಪದಡ್ಕ, ಕೋಶಾಧಿಕಾರಿ ರಾಜೇಶ್ ಮೇಗಿನಮನೆ, ಜತೆ ಕಾರ್ಯದರ್ಶಿ ಸುರೇಶ್ ರೈ ಪಲ್ಲತ್ತಾರು, ಶ್ರೀ ಪೂಮಾಣಿ ಕಿನ್ನಿಮಾಣಿ- ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವಿರಾಜ ಶೆಟ್ಟಿ ಅಣಿಲೆ, ಗ್ರಾ.ಪಂ ಸದಸ್ಯರಾದ ರವಿರಾಜ ರೈ ಸಜಂಕಾಡಿ, ಸಂತೋಷ್ ಆಳ್ವ ಗಿರಿಮನೆ, ನಾರಾಯಣ ರಾವ್ ಪಡುಮಲೆ, ಸೇನಾವರಾದ ಉದಯ ಕುಮಾರ್ ಪಡುಮಲೆ, ಪ್ರಗತಪರ ಕೃಷಿಕ ಜಯಂತ ರೈ ಕುದ್ಕಾಡಿ, ಬಾಲಕೃಷ್ಣ ರೈ ಕುದ್ಕಾಡಿ, ಪುತ್ತೂರು ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಸುಧಾಕರ ಶೆಟ್ಟಿ ಮಂಗಳಾದೇವಿ ಕೃಷ್ಣ ರೈ ಕುದ್ಕಾಡಿ ಹಾಗೂ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.