ಪುತ್ತೂರು: ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತೀ ಆದಿತ್ಯವಾರ ಮಕ್ಕಳಿಗೆ ಉಚಿತವಾಗಿ ನಡೆಯುವ ಜ್ಞಾನ ಸಂಸ್ಕಾರ ಧಾರ್ಮಿಕ ಶಿಕ್ಷಣ, ಮೌಲ್ಯಾಧಾರಿತ ಶಿಕ್ಷಣವವು ಜ.12ರಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಜಲುಮಾರು ಶ್ರೀಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆಯವರು ಮಾತನಾಡಿ, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಮಾತನಾಡಿ, ಧರ್ಮ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಉಮಾಮಹೇಶ್ವರ ಟ್ರಸ್ಟ್‌ನ ಸದಸ್ಯ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನ ಸಂಸ್ಕಾರದ ಶಿಕ್ಷಕಿ ರೇಖಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸುಮಾರು 25 ಮಕ್ಕಳು ಶಿಬಿರಲ್ಲಿ ನೋಂದಾಯಿಸಿದರು.