ಧನುಪೂಜೆ ಸಂಪನ್ನ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಸಾಗರ-ರಾತ್ರಿ ಶ್ರೀ ದೇವರಿಗೆ ಕನಕಾಭಿಷೇಕ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲ ಜ.14ರ ಮಕರ ಸಂಕ್ರಮಣದಂದು ರಾತ್ರಿಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಪೂರ್ವಶಿಷ್ಟ ಪದ್ಧತಿಯಂತೆ ಶ್ರೀ ದೇವರಿಗೆ ಕನಕಾಭಿಷೇಕ ನಡೆಯಿತು. ಬೆಳಿಗ್ಗೆ ಧನು ಪೂಜೆಗೆ ದೇವಳದ ಒಳಗೆ ಭಕ್ತಸಾಗರವೇ ತುಂಬಿತ್ತು. ಭಕ್ತರಿಗೆಲ್ಲರಿಗೂ ಪೂಜೆಯ ಪ್ರಸಾದದ ಜೊತೆಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.


ರಾತ್ರಿ ಕನಕಾಭಿಷೇಕ:

ರಾತ್ರಿ ಮಹಾಲಿಂಗೇಶ್ವರ ದೇವರಿಗೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇ.ಮೂ.ವಸಂತ ಕೆದಿಲಾಯ ಅವರಿಂದ ಪೂಜೆ ನಡೆಯಿತು. ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಕನಕಾಭಿಷೇಕ ಜರುಗಿತು. ಅದಕ್ಕೂ ಮೊದಲು ರಾಧಾಕೃಷ್ಣ ನಂದಿಲ ಸೇವಾರ್ಥ ಪಲ್ಲಕಿ ಸೇವೆ ನಡೆಯಿತು. ಅರಸೊತ್ತಿಗೆಯ ಕಾಲದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಕನಕಾಭಿಷೇಕ ನೆರವೇರಿಸಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಳಿನಿ ಪಿ ಶೆಟ್ಟಿ, ಮಹಾಬಲ ರೈ ವಳತ್ತಡ್ಕ, ಕೃಷ್ಣವೇಣಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ, ವಿನಯ ಸುವರ್ಣ, ಈಶ್ವರ ಬೆಡೇಕರ್, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಸದಸ್ಯರು, ಹಿರಿಯರಾದ ಕಿಟ್ಟಣ್ಣ ಗೌಡ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ., ಜಗನ್ನಿವಾಸ ರಾವ್, ವಾಸ್ತು ಇಂಜಿನಿಯರ್ ಮತ್ತು ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಸುದೇಶ್ ಚಿಕ್ಕಪುತ್ತೂರು, ಪಿ.ಜಿ.ಚಂದ್ರಶೇಖರ್ ರಾವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಸುವಸ್ತುಗಳಿಂದ ಕನಕಾಭಿಷೇಕ
ಭಂಡಾರದ ವತಿಯಿಂದ ಒಂದು ದೊಡ್ಡ ಹರಿವಾಣದಲ್ಲಿ ಹೊದ್ಲು, ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ ಹಾಗೂ ಬೆಳ್ಳಿಯ ತುಣಕಗಳು ಚಾಲ್ತಿಯಲ್ಲಿರುವ ನಾಣ್ಯಗಳನ್ನು ಒಪ್ಪ ಓರಣವಾಗಿ ಜೋಡಿಸಿ ದೇವರ ಬಲಿಯ ಕೊನೆಯ ಸುತ್ತಿನಲ್ಲಿ ಉಳ್ಳಾಲ್ತಿ ಅಮ್ಮನವರ ನಡೆಯಲ್ಲಿ ಕನಕಾಭಿಷೇಕ ನೆರವೇರಿಸಲಾಯಿತು. ಪ್ರತಿ ವರ್ಷ ದೇವಳದ ಸಿಬ್ಬಂದಿ ಪದ್ಮನಾಭ ಅವರು ಕನಕಾಭಿಷೇಕದ ಸುವಸ್ತುಗಳನ್ನು ಜೋಡಿಸುವ ಕಾರ್ಯ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here