ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಜಯಂತಿಯನ್ನು ಜ. 13 ರಂದು
ನಡೆಸಿದರು.
ಸಂಪನ್ಮೂಲ ವ್ಯಕ್ತಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಮೊಗ್ರಾಲ್ ಸ್ವಾಮಿ ವಿವೇಕಾನಂದರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಮತ್ತು ಭಾರತೀಯ ಸಂಸ್ಕೃತಿಯನ್ನು ಭವಿಷ್ಯಕ್ಕಾಗಿ ಉಳಿಸುವುದರ ಜೊತೆಗೆ ವಿಕಸಿತ ಭಾರತದ ಪರಿಕಲ್ಪನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ವಿವೇಕ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಂಗ್ಲಮಾಧ್ಯಮ ವಿಭಾಗದ ಅಧ್ಯಕ್ಷ ಸದಾಶಿವ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಪುಲಸ್ತ್ಯ ರೈ, ಮತ್ತು ಶಿವಪ್ರಸಾದ್ ರೈ ಮೈಲೇರಿ, ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಶೈಲಶ್ರೀ ರೈ ಎಸ್. ಅವರು ಸ್ವಾಗತಿಸಿ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಭಾರ ಮುಖ್ಯಗುರು ಶ್ವೇತಾ ಕುಂದರ್ ವಂದಿಸಿದರು. ಪವಿತ್ರ ಎನ್ ರೈ ಕಾರ್ಯಕ್ರಮ ನಿರೂಪಿಸಿದರು.