





ಕಾಣಿಯೂರು: ಪುತ್ತೂರಿನ ಇನ್ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್ಮೆಂಟ್ ಇವರ ನೇತೃತ್ವದಲ್ಲಿ “ಸಂಸಾರ” (ಸಂಘಟನೆಗಾಗಿ ಸಾಮಾಜಿಕ ರಂಗಭೂಮಿ) ಕಲಾತಂಡದ ವತಿಯಿಂದ ಅಯೋಡಿನ್ ಕೊರತೆ ಮತ್ತು ಪೋಷಕಾಂಶಗಳು ಎಂಬ ವಿಷಯದ ಕುರಿತು ಬೀದಿನಾಟಕ ಪ್ರದರ್ಶನವು ಕಾಣಿಯೂರು ಪಂಚಾಯತ್ ವ್ಯಾಪ್ತಿಯ ಕಾಣಿಯೂರಿನಲ್ಲಿ ಜ. 15 ರಂದು ನಡೆಯಿತು.


ಈ ಸಂದರ್ಭದಲ್ಲಿ ಕಾಣಿಯೂರು ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ, ಪಿಡಿಓ ರಘು ಎನ್. ಬಿ, ಸದಸ್ಯ ತಾರಾನಾಥ ಇಡ್ಯಡ್ಕ, ಕಾಣಿಯೂರು ಸ. ಹಿ. ಪ್ರಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಕಾಣಿಯೂರು ಶಾಲಾ ಮುಖ್ಯಶಿಕ್ಷಕ ಬಾಲಕೃಷ್ಣ ಕೆ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.














