ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ಜ.9ಮತ್ತು 10 ರಂದು ನಡೆದ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದ 17ರ ವಯೋಮಾನದಲ್ಲಿ ದ್ವೀತಿಯ ಸ್ಥಾನವನ್ನು ಪಡೆದ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವು ಜ.15ರಂದು ಶಾಲಾ ಆಡಿಟೋರಿಯಂನಲ್ಲಿ ನಡೆಯಿತು.
ವಿದ್ಯಾರ್ಥಿಗಳಾದ 8ನೇ ತರಗತಿಯ ಹನಾ ನಫೀಸ, 9ನೇ ತರಗತಿಯ ವಿದ್ಯಾರ್ಥಿಗಳಾದ ವೈಗಾ ಎಂ, ಫಾತಿಮ ರಿಧಾ, ನಿಹಾನಿ ಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆನೆಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ, ಹಾಗೂ ಹಿತಾಶ್ರೀ ಜಿ. ಗೌಡ ಹಾಗೂ ತರಬೇತಿ ನೀಡಿದ ಶಾಲಾ ದೈಹಿಕ ಶಿಕ್ಷಕ ಹರೀಶ್ರವರನ್ನು ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿಯವರು ಶಾಲು ಹಾಗೂ ನೆನೆಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಬಿ.ಎಸ್, ಶಾಲಾ ರಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ, ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷೆ ಸುನೀತಾ ಪಿರೇರಾ ಹಾಗೂ ಉಪಾಧ್ಯಕ್ಷ ರಾಮಚಂದ್ರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಾದ ಪವಿತ್ರಾ ವಿ. ಸ್ವಾಗತಿಸಿ, ಸೌಮ್ಯ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು.