ಕಡಬ: ದಕ್ಷಿಣ ಭಾರತ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜನವರಿ 10 ರಿಂದ 12 ರವರೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಸೌತ್ ಏಷ್ಯನ್ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ಉಳಿಪು ಬಾಲಕೃಷ್ಣ ಗೌಡ 5000 ಮೀಟರ್ ವೇಗದ ನಡಿಗೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಮತ್ತು400 ಮೀಟರ್ ಹಡಲ್ಸ್ ನಲ್ಲಿ ನಾಲ್ಕನೇ ಸ್ಥಾನ 5000 ಮೀ ಓಟದಲ್ಲಿ ಆರನೇ ಸ್ಥಾನವನ್ನು ಪಡೆದಿರುತ್ತಾರೆ.
ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಭೂತಾನ್ ಬಾಂಗ್ಲಾದೇಶಗಳ ಸುಮಾರು 1700 ವಿವಿಧ ಕ್ರೀಡೆಯ ಕ್ರೀಡಾಪಟುಗಳು ಭಾಗವಹಿಸಿದ್ದರು.