ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪುತ್ತೂರು ಕ್ಷೇತ್ರ ಇದರ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡಾ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನಾ ಇದರ ಸಹಯೋಗದೊಂದಿಗೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇದರ ಸಹಭಾಗಿತ್ವದಲ್ಲಿ ಕೃಷಿ ಮೇಳ ಹಾಗೂ ಉಚಿತ ಕಣ್ಣಿನ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಜ.22 ರಂದು ಮುಕ್ರಂಪಾಡಿ ಸುಭದ್ರಾ ಸಭಾ ಮಂದಿರದಲ್ಲಿ ನಡೆಯಲಿದೆ.
ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಮಹಾ ಪ್ರಬಂಧಕರು ಮತ್ತು ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ರೇಖಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿ.ಆರ್.ಡಿ.ಎಫ್ ಕಾರ್ಯದರ್ಶಿ ರಾಜೇಂದ್ರ ರೈ ಉಪಸ್ಥಿತಿ ವಹಿಸಲಿದ್ದಾರೆ.