ಜ.18 : ಸವಣೂರಿನಲ್ಲಿ ರಾಜ್ಯ ಮಟ್ಟದ ಜನಪದ ನೃತ್ಯ ಸ್ಪರ್ಧೆ ಕಲಾವೈಭವ ಹಾಗೂ ರಾಜ್ಯ ಯುವ ಪ್ರಶಸ್ತಿ ಪ್ರದಾನ

0

ಸವಣೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ.ಜಿಲ್ಲಾ ಯುವಸಂಘಗಳ ಒಕ್ಕೂಟ ಮಂಗಳೂರು ಇವುಗಳ ಆಶ್ರಯದಲ್ಲಿ ಸವಣೂರು ಯುವಕ ಮಂಡಲ, ಸವಣೂರು ಉ.ಹಿ.ಪ್ರಾ.ಶಾಲೆಯ ಸಹಕಾರದೊಂದಿಗೆ ರಾಜ್ಯ ಮಟ್ಟದ ಜನಪದ ನೃತ್ಯ ಸ್ಪರ್ಧೆ ಕಲಾವೈಭವ – 2025 ಹಾಗೂ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭವು ಜ.18ರಂದು ಬೆಳಿಗ್ಗೆ 10 ರಿಂದ ಸವಣೂರು ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.


ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ 15,000 ,ದ್ವಿತೀಯ 10,000 ,ತೃತೀಯ 7500 ಬಹುಮಾನ ಹಾಗೂ ಶಾಶ್ವತ ಫಲಕ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳ 31 ಸಾಧಕರಿಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜಿಲ್ಲೆಯ ವಿಶೇಷ ಸಾಧಕ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರಾದ ಕಡಬ ತಾಲೂಕಿನ ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪುನೀತ್ ಹಾಗೂ ಪುತ್ತೂರು ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಅವರಿಗೆ ಜಿಲ್ಲಾ ಯುವ ಕ್ರೀಡಾಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ವೈಯಕ್ತಿಕ ರಾಜ್ಯ ಯುವ ಪ್ರಶಸ್ತಿ ದ.ಕ.ದಿಂದ ಬೆಳ್ತಂಗಡಿಯ ಸ್ಮಿತೇಶ್ ಬಾರ್ಯ, ಸಾಂಘಿಕ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ ನಂದಳಿಕೆ ಕಾರ್ಕಳಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿವಿಧ ಪ್ರಮುಖರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here