ಸವಣೂರು : ದ.ಕ.ಜಿಲ್ಲಾಡಳಿತ ,ದ.ಕ.ಜಿ.ಪಂ.,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ,ದ.ಕ.ಜಿಲ್ಲಾ ಯುವಸಂಘಗಳ ಒಕ್ಕೂಟ ಮಂಗಳೂರು ಇವುಗಳ ಆಶ್ರಯದಲ್ಲಿ ಸವಣೂರು ಯುವಕ ಮಂಡಲ ,ಸವಣೂರು ಉ.ಹಿ.ಪ್ರಾ.ಶಾಲೆಯ ಸಹಕಾರದೊಂದಿಗೆ ಜಿಲ್ಲಾ ಯುವ ಸಮಾವೇಶ ತರಬೇತಿ ಕಾರ್ಯಾಗಾರ – ರಾಜ್ಯ ಮಟ್ಟದ ಜನಪದ ನೃತ್ಯ ಸ್ಪರ್ಧೆ ಕಲಾವೈಭವ – 2025 ,ರಾಜ್ಯ ಯುವಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮವು ಜ.18ರಂದು ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಉದ್ಘಾಟಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ,ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು,ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಎಸ್.ಬಾಲಾಜಿ,ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ,ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಶ್ರಫ್ ಜನತಾ,ಮುಖ್ಯಗುರು ನಿಂಗರಾಜು,ಬೆಳಗಾವಿ ಯುವಜನ ಒಕ್ಕೂಟದ ಅಧ್ಯಕ್ಷ ಸಿದ್ದಣ್ಣ ದುರದುಂಡಿ,ಕೊಡಗು ಜಿಲ್ಲಾಧ್ಯಕ್ಷ ಸುಕುಮಾರ್ ಮೊದಲಾದವರಿದ್ದರು.
ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು, ಮಾಮಚ್ಚನ್ ನಿರೂಪಿಸಿದರು.
ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪುನೀತ್ ಹಾಗೂ ಪುತ್ತೂರು ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಅವರಿಗೆ ಜಿಲ್ಲಾ ಯುವ ಕ್ರೀಡಾಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.