ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕ್ರೀಡಾ ಸಾಧಕ ಪ್ರಶಸ್ತಿಗೆ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಾಮೊದರ ಕಜೆ ಆಯ್ಕೆಯಾಗಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ದ.ಕ.ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ಯುವ ಒಕ್ಕೂಟಗಳ ಸಂಘ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆಯುವ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಯುವ ಸಮಾವೇಶ ಕಾರ್ಯಗಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಬೆಟ್ಟಂಪಾಡಿ ಗ್ರಾಮದ ಕಜೆ ನಿವಾಸಿಯಾದ ಇವರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.