ಪುತ್ತೂರು: ಕೊರಿಂಗಿಲ ಜುಮಾ ಮಸೀದಿಯ ಖತೀಬ್ ಅಯ್ಯೂಬ್ ವಹಬಿ ಅವರು ಪವಿತ್ರ ಉಮ್ರಾ ಯಾತ್ರೆಗೆ ತೆರಳುವ ಹಿನ್ನೆಲೆಯಲ್ಲಿ ಅವರಿಗೆ ಜಮಾಅತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಜ.17ರಂದು ಕೊರಿಂಗಿಲ ಜುಮಾ ಮಸೀದಿಯಲ್ಲಿ ನಡೆಯಿತು.
ಕೊರಿಂಗಿಲ ಜಮಾಅತ್ ಅಧ್ಯಕ್ಷ ಮಹಮ್ಮದ್ ಕುಂಞಿ ಹಾಜಿ, ಆಲಿಕುಂಞಿ ಕೊರಿಂಗಿಲ, ಮಹಮ್ಮದ್ ಹಾಜಿ ಶಾಲಾಬಳಿ, ಶಾಹುಲ್ ಹಮೀದ್ ಕೊರಿಂಗಿಲ, ಅಶ್ರಫ್ ಕುಕ್ಕುಪುಣಿ ಮತ್ತಿತರ ಹಲವಾರು ಮಂದಿ ಉಪಸ್ಥಿತರಿದ್ದರು.