ವಿಟ್ಲ: ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ಎನ್., ಉಪಾಧ್ಯಾಕ್ಷರಾಗಿ ಮಂಜುಳಾರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಳಿದಂತೆ ಮಹಾಬಲೇಶ್ವರ ಭಟ್.ಎ, ಉದಯಕುಮಾರ್, ಸದಾನಂದ ಗೌಡ ಸೇರಾಜೆ, ಮೋಹನ ದಾಸ್ ಉಕ್ಕುಡ, ರಾಘವೇಂದ್ರ ಪೈ.ಎ, ದಿನೇಶ. ಕೆ.ಗೌಡ ಕೋಡಿಜಾಲು, ಸಂಧ್ಯಾ ಮೋಹನ, ವಾಸು ಸಿ.ಹೆಚ್., ಹರೀಶ ನಾಯ್ಕ, ತೀರ್ಥರಾಮರವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಜ.5ರಂದು ನಡೆದ ಚುನಾವಣೆಯಲ್ಲಿ ಹನ್ನೆರಡು ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಳಿಯ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕರಾದ ಗೋಪಾಲ್, ಎಸ್.ಸಿ. ಡಿ.ಸಿ.ಸಿ. ಬ್ಯಾಂಕ್ ನ ವಿಟ್ಲ ವಲಯ ಮೇಲ್ವಿಚಾರಕರಾದ ಯೋಗೀಶ್ ಹೆಚ್.,
ಮುಖ್ಯಕಾರ್ಯನಿರ್ವಹಣಾಧಿಕಾರಿ ಭುವನೇಶ್ವರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.