ಪುತ್ತೂರು: ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ. 14 ರಂದು ಅರ್ಧ ಏಕಾಹ ಭಜನೆ ಕಾರ್ಯಕ್ರಮ ನಡೆಯಿತು.
ದೇವಾಲಯದ ಅರ್ಚಕ ನಾರಾಯಣ ಬಡಿಕಿಲ್ಲಾಯರವರು ದೀಪ ಬೆಳಗಿಸಿ, ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಪದಾಧಿಕಾರಿಗಳು, ಊರ ಮತ್ತು ಪರವೂರ ಭಕ್ತಾದಿಗಳು ಭಾಗವಹಿಸಿದರು.
ಅರ್ಧ ಏಕಾಹ ಭಜನೆಯಲ್ಲಿ ಸವಣೂರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಸವಣೂರು ಶ್ರೀ ವಿಷ್ಣುಪ್ರಿಯಾ ಮಹಿಳಾ ಭಜನಾ ಮಂಡಳಿ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿ, ಪಾದೆಬಂಬಿಲ ಶ್ರೀ ದುರ್ಗಾ ಭಜನಾ ಮಂಡಳಿ, ಪುಣ್ಚಪ್ಪಾಡಿ ದೇವಸ್ಯ ಶ್ರೀ ಹರಿ ಭಜನಾ ಮಂಡಳಿ, ಭಕ್ತಕೋಡಿ ಶ್ರೀ ರಾಮ ಭಜನಾ ಮಂಡಳಿ, ನಾವೂರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ಕುಮಾರಮಂಗಲ ಕೃಷ್ಣಾ ಅರ್ಪಿತಾ ಭಜನಾ ಸಂಘಗಳಿಂದ ಭಜನೆ ನಡೆಯಿತು. ಬಳಿಕ ಶ್ರೀ ದೇವರಿಗೆ ರಂಗಪೂಜೆ ನಡೆಯಿತು, ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು.