ಆಲಂಕಾರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರಿನಲ್ಲಿ ಕ್ರೀಡೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಆಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಸಿದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿಯವರು ಪ್ರಸ್ತುತ ದಿನಗಳಲ್ಲಿ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ನೂತನ ಕಾರ್ಯಕ್ರಮಗಳ ಮತ್ತು ಶಾಲೆಯಲ್ಲಿನ ಎಲ್ಲಾ ಶಿಕ್ಷಕರ ಕಾರ್ಯವೈಖರಿ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಸದಸ್ಯರಾದ ರೂಪಶ್ರೀ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುಂದರ ಎ.ಬಿ, ಉಪಾಧ್ಯಕ್ಷರಾದ ಪ್ರಮೀಳಾ, ಮಾತೃ ಸಂಘದ ಅಧ್ಯಕ್ಷರಾದ ಶೈಲಾ ಪ್ರಭ ಉಪಸ್ಥಿತರಿದ್ದರು. ಇದೇ ಸಂಧರ್ಭದಲ್ಲಿ ಶಾಲೆಯ ಅಡುಗೆ ಸಿಬ್ಬಂದಿ ವರ್ಗದವರನ್ನು ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಾಲೆಯ ವಿದ್ಯಾರ್ಥಿನಿ ಶಾರ್ವಿ ಯು ಎಸ್ ರವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಶಿಕ್ಷಕಿ ರೇಖಾ ಪಿ ಸನ್ಮಾನಿತರ ಪಟ್ಟಿಯನ್ನು ವಾಚಿಸಿ, ಆಟೋಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದೈಹಿಕ ಶಿಕ್ಷಕರಾದ ಅಬ್ರಾಹಂ. ಎಂ ಸ್ವಾಗತಿಸಿ, ಪ್ರಭಾರ ಮುಖ್ಯ ಗುರು ರಾಘವೇಂದ್ರ ಪ್ರಸಾದ್ ಎ ವಂದಿಸಿದರು.
ಶಾಲೆಯ ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿ.ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ಮತ್ತು ಏರೋಬಿಕ್ ನೃತ್ಯ ನಡೆದು ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಅಥ್ಲೆಟಿಕ್ ಕ್ರೀಡಾ ಕೂಟವನ್ನು ನಡೆಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರು, ಎಸ್ ಡಿ ಎಮ್ ಸಿ ಸದಸ್ಯರು, ಮಾತೃ ಸಂಘದವರ ಕಾರ್ಯಕ್ರಮದಲ್ಲಿ ಸಹಕರಿಸಿದರು.