ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರ ಭೇಟಿ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರು ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ. 20ರಂದು ಭೇಟಿ ನೀಡಿದರು.

ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರಣ್ಣರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ ಹೊಸಳ್ಳಿಗಮ್ಮನ ದರ್ಶನ ಮಾಡಿದ ನಂತರ ದೇವಳದ ಆಡಳಿತ ಕಚೇರಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅವರು ನಾರಾಯಣಸ್ವಾಮಿಯವರನ್ನ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೇವಾಲಯದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಹಾಗೂ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here