ಪುತ್ತೂರು: ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು.
ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಅಬೂಬಕ್ಕರ್ ಸಿದ್ದೀಕ್ ಕೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆರವಾದ ಕೆಲವು ಸ್ಥಾನಗಳಿಗೆ ಮರು ಆಯ್ಕೆ ಪ್ರಕ್ರಿಯೆಯನ್ನು ದ.ಕ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನಡೆಸಿಕೊಟ್ಟರು. ಪುತ್ತೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿದ್ದ ಅಬೂಬಕ್ಕರ್ ಸಿದ್ದೀಕ್ ಕೆ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಬಾವು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಸಾಲ್ಮರ, ಕೋಶಾಧಿಕಾರಿಯಾಗಿ ಮುಸ್ತಫಾ ಡಿ.ಬಿ ವಿಟ್ಲ ರನ್ನು ಆಯ್ಕೆ ಮಾಡಲಾಯಿತು.
ನ್ಯಾಯವಾದಿ ಅಬ್ದುಲ್ ರಹಿಮಾನ್ ಬಂಡಾಡಿ, ಬಿ.ಕೆ ಸುಲೈಮಾನ್ ರನ್ನು ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ನವಾಝ್ ಕಟ್ಟೆ ಉಪಸ್ಥಿತರಿದ್ದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು ವಂದಿಸಿದರು.