ನೆಲ್ಯಾಡಿ: ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5 ರಿಂದ 10ರ ತನಕ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ಜ.20ರಂದು ದೇವಸ್ಥಾನದಲ್ಲಿ ನಡೆಯಿತು.
ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕರಾದ ಪ್ರವೀಣ್‌ಕುಮಾರ್ ಅವರು ಮಾತನಾಡಿ, ದೇವಸ್ಥಾನ ಜೀರ್ಣೋದ್ದಾರಗೊಂಡು ಬ್ರಹ್ಮಕಲಶೋತ್ಸವ ನಡೆಯುತ್ತಿರುವುದು ನಮ್ಮ ಜನ್ಮದಲ್ಲಿ ನಮಗೆ ಪುಣ್ಯದ ಕಾರ್ಯ. ಈ ಬ್ರಹ್ಮಕಲಶೋತ್ಸವದಲ್ಲಿ ಆಯಾ ಸಮಿತಿಯವರು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಬ್ರಹ್ಮಕಲಶೋತ್ಸವದ ಸೇವೆಯಲ್ಲಿ ಸೇವಕರಾಗಿ, ತಮ್ಮ ಮನೆಯ ಕೆಲಸವೆಂದು ತಿಳಿದು ತೊಡಗಿಕೊಳ್ಳಬೇಕು. ಆಗ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹೇಳಿದರು. ಬಳಿಕ ಅವರು ಹೊರೆಕಾಣಿಕೆ ಸಂಗ್ರಹ ನಿಟ್ಟಿನಲ್ಲಿ ಯೋಜನೆಯ ಒಕ್ಕೂಟದ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಮಾಧವ ಸರಳಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಶಿವಾನಂದ ಕಾರಂತ ಕಾಂಚನ, ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಪಾಲೇರಿ, ಪ್ರಧಾನ ಸಂಚಾಲಕ ಸತೀಶ್ ಕೆ.ಎಸ್.ದುರ್ಗಾಶ್ರೀ ನೆಲ್ಯಾಡಿ, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಯ್‌ರಾಜ್ ಸರಳಾಯ, ಯೋಜನಾಧಿಕಾರಿ ಮೇದಪ್ಪ ಗೌಡ, ಜೊತೆ ಕಾರ್ಯದರ್ಶಿ ಮಹೇಶ್ ಆಚಾರ್ಯ ಪಾತೃಮಾಡಿ, ಭಜನಾ ಸಮಿತಿ ಸಂಚಾಲಕ ನೋಣಯ್ಯ ಪೂಜಾರಿ ಅಂಬರ್ಜೆ, ಪ್ರಚಾರ ಸಮಿತಿ ಸಂಚಾಲಕ ರಾಜಶೇಖರ್ ಹೊಸಮನೆ, ಸಹ ಸಂಚಾಲಕ ಬಾಬು ಪೂಜಾರಿ ಕಿನ್ಯಡ್ಕ, ಗೋಳಿತ್ತೊಟ್ಟು ವಲಯ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ಹೊರೆಕಾಣಿಕೆ ಸಮಿತಿ ಸಂಚಾಲಕ ನೋಣಯ್ಯ ಗೌಡ ಡೆಬ್ಬೇಲಿ, ಪದ್ಮನಾಭ ಶೆಟ್ಟಿ ಮರಂದೆ, ಸಹ ಸಂಚಾಲಕ ಜನಾರ್ದನ ಪೂಜಾರಿ ಮುರಿಯೇಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ, ಗೋಳಿತ್ತೊಟ್ಟು ವಲಯ ಮೇಲ್ವಿಚಾರಕಿ ಜಯಶ್ರೀ, ಸೇವಾಪ್ರತಿನಿಧಿಗಳು, ವಿವಿಧ ಒಕ್ಕೂಟಗಳ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು.