ಕೋಟೆಕಾರ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರಿಗೆ ಶಾಸಕ ಅಶೋಕ್ ರೈರಿಂದ ಅಭಿನಂದನೆ

0

ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ,ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.


ಘಟನೆ ನಡೆದು ಎರಡು ದಿನದೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ದರೋಡೆ ಪ್ರಕರಣ ಅತ್ಯಂತ ಭಯಾನಕವಾಗಿತ್ತು ,ಮಾತ್ರವಲ್ಲದೆ ಹಾಡಹಗಲೇ ಬ್ಯಾಂಕ್‌ಗೆ ನುಗ್ಗಿ ಬೆದರಿಸಿ ಹಣ ಮತ್ತು ಚಿನ್ನಾಭರಣವನ್ನು ದೋಚಿದ್ದರು. ದರೋಡೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ದರೋಡೆಯಲ್ಲಿ ಪರಿಣಿತರೇ ಆಗಿದ್ದರು ಎಂಬುದು ಮೇಲ್ನೋಟಕ್ಕೆ ಸಾಭೀತಾಗಿತ್ತು. ಬಂಧಿತ ಆರೋಪಿಗಳ ವಿರುದ್ದ ಕಠಿಣ ಕ್ರಮ ಜರಗಿಸುಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.

ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಿದ ಮಂಗಳೂರು ಹಾಗೂ ಪುತ್ತೂರು ವಿಭಾಗದ ಪೊಲೀಸ್ ಅಧಿಕಾರಿಗಳಿಗೆ, ಕಮಿಷನರ್‌ಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ನಮ್ಮ ಪೊಲೀಸರ ಸಾಮರ್ಥ್ಯ ಈ ಪ್ರಕರಣದಲ್ಲಿ ಸಾಬಿತಾಗಿದೆ ಎಂದು ಶಾಸಕರು ಹೇಳಿದರು.

LEAVE A REPLY

Please enter your comment!
Please enter your name here