ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ.
ಜ.23 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಭಜನಾ ಕಾರ್ಯಕ್ರಮ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದೇವರ ಅರ್ಚಕರ ನೇತೃತ್ವದಲ್ಲಿ ಜರಗಲಿದ್ದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಜ.24 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ, ಅನ್ನಸಂತರ್ಪಣೆ ನಡೆಯಲಿದೆ. ಜ.25 ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ ಅರ್ಧ ಏಕಾಹ ಭಜನೆ, ರಾತ್ರಿ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ಕೊರಗಜ್ಜ ದೈವಕ್ಕೆ ಎಣ್ಣೆ ಕೊಡುವುದು, ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಬಳಿಕ ಅನ್ನ ಸಂತರ್ಪಣೆ ಜರಗಲಿದೆ.
ಭಾಗವಹಿಸುವ ಭಜನಾ ಮಂಡಳಿಗಳು:
ಕಾರ್ಯಕ್ರಮದಲ್ಲಿ ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಸ್ವಾಮಿ ಕೊರಗಜ್ಜ ಭಜನಾ ಮಂಡಳಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಿಷನ್ಮೂಲೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಮರಾಠಿ ಯುವ ವೇದಿಕೆ ಭಜನಾ ತಂಡ, ಶ್ರೀ ವಜ್ರಮಾತಾ ಮಹಿಳಾ ಭಜನಾ ಮಂಡಳಿ, ಮೊಗರು ಶ್ರೀ ಮಹಾವಿಷ್ಣು ಭಜನಾ ಮಂಡಳಿ, ದೇವಸ್ಯ ಶ್ರೀಹರಿ ಭಜನಾ ಮಂಡಳಿ, ಉಜಿರೆ ಗುರುಪಳ್ಳ ಶ್ರೀ ಗುರುರಾಘವೇಂದ್ರ ಮಹಿಳಾ ಭಜನಾ ಮಂಡಳಿ, ಕಡಬ ಭಜನಾಮೃತ ಭಜನಾ ತಂಡ, ಬಳ್ಪ ಧರ್ಮಶಾಸ್ತಾವು ಕುಣಿತ ಭಜನಾ ತಂಡದ ಸದಸ್ಯರಿಂದ ಭಜನೆ ಕಾರ್ಯಕ್ರಮ ಜರಗಲಿದೆ.
ಹೆಚ್ಚಿನ ಮಾಹಿತಿಗೆ ಗಣೇಶ್ ಪೂಜಾರಿ(7349237945), ವಿಶ್ವನಾಥ ಮಣ್ಣಾಪು(7760580714), ದಿನೇಶ್ ಕೆಮ್ಮಿಂಜೆ(7676806506) ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಕಾರ್ಯದರ್ಶಿ ದಿನೇಶ್ ಕೆಮ್ಮಿಂಜೆ, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಕೋಶಾಧಿಕಾರಿ ಗುರುವ ಮಣ್ಣಾಪು, ಮಧ್ಯಸ್ತರದ ಗಣೇಶ್ ಪೂಜಾರಿ ಕೆಮ್ಮಿಂಜೆ, ದೈವದ ಪ್ರಧಾನ ಅರ್ಚಕರಾದ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಕೆ.ಮಣ್ಣಾಪು, ಗೌರವ ಸಲಹೆಗಾರರಾದ ಗಂಗಾಧರ ಮಣ್ಣಾಪು, ವಿಶ್ವನಾಥ ನಾಯ್ಕ ಅಮ್ಮುಂಜ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರ ಸಿದ್ಧಿಸುವ ಕ್ಷೇತ್ರ…
ಈ ಮಣ್ಣಾಪು ಕ್ಷೇತ್ರದಲ್ಲಿ ವರ್ಷದಿಂದ ವರ್ಷಗೆ ಭಕ್ತಾಧಿಗಳ ಸಂಖ್ಯೆ ಗಣನೀಯ ಏರುತ್ತಿರುವುದು ಶ್ರೀ ಕೊರಗಜ್ಜನ ಆಶೀರ್ವಾದವಾಗಿದೆ. ಭಕ್ತರು ಶೃದ್ಧೆಯಿಂದ ಕೊರಗಜ್ಜನಲ್ಲಿ ಪ್ರಾರ್ಥಿಸಿದರೆ ವರ ಸಿದ್ಧಿಸುತ್ತದೆ ಮಾತ್ರವಲ್ಲ ತಮ್ಮ ಇಷ್ಟಾರ್ಥಗಳನ್ನು ಕೊರಗಜ್ಜನವರು ಕರುಣಿಸಿಕೊಟ್ಟಿದ್ದಾರೆ. ಶ್ರೀ ಕ್ಷೇತ್ರವು ಹೃದಯವಂತ ಭಕ್ತರಿಂದ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ಸಂಗತಿ. ಶ್ರೀ ಕ್ಷೇತ್ರದಲ್ಲಿ ಯುವಕರೇ ಶಕ್ತಿಯಾಗಿದ್ದಾರೆ. ನೇಮೋತ್ಸವವು ಶಿಸ್ತುಬದ್ಧವಾಗಿ ನಡೆಯಲು ಭಕ್ತರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ನೇಮೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಕೊರಗಜ್ಜನ ಕೃಪೆಗೆ ಪಾತ್ರರಾಗಬೇಕು ಎಂದು ವಿನಂತಿ.
-ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಗೌರವಾಧ್ಯಕ್ಷರು, ಶ್ರೀ ಕ್ಷೇತ್ರ ಮಣ್ಣಾಪು
-ಜ.22:ಹಸಿರುವಾಣಿ ನೀಡಲಿಚ್ಛಿಸುವವರು ಸೋಮವಾರ ಮೊದಲು ಶ್ರೀ ಕ್ಷೇತ್ರಕ್ಕೆ ಒಪ್ಪಿಸತಕ್ಕದ್ದು.
-ಭಕ್ತಾಧಿಗಳಿಂದ ಅನ್ನದಾನಕ್ಕೆ ಬೇಕಾದ ಅಕ್ಕಿ, ತೆಂಗಿನಕಾಯಿ, ದವಸಧಾನ್ಯಗಳು, ತರಕಾರಿಗಳು, ಬಾಳೆಎಲೆ ಮೊದಲಾದುವುಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು.
-ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200) ನಡೆಯಲಿರುವುದು.
-ಹರಕೆಯನ್ನು ಒಪ್ಪಿಸುವವರು ಅದೇ ದಿನ ಸಮಿತಿಯವರಲ್ಲಿ ತಿಳಿಸತಕ್ಕದ್ದು.